
ಟೊಮೆಟೊ ಬಳಿಕ ಇದೀಗ ಈರುಳ್ಳಿ ಸರದಿ: ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಸಾಧ್ಯತೆ?
ಬೆಂಗಳೂರು: ಗಗನಕ್ಕೇರಿದ್ದ ಟೊಮ್ಯಾಟೋ ಬೆಲೆ ಇಳಿಮುಖವಾಗುತ್ತಿದೆ ಎಂದು ಸಮಾಧಾನಪಡುವಷ್ಟರಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ಈ ಬೆಳವಣಿಗೆ ಇದೀಗ ಆತಂಕ ಸೃಷ್ಟಿಸುತ್ತಿದೆ.
ಕಳೆದ ವಾರ ಚಿಲ್ಲರೆ ಅಂಗಡಿಗಳಲ್ಲಿ ಕೆಜಿಗೆ 25 ರೂ.ಗಳಷ್ಟಿದ್ದ ಈರುಳ್ಳಿ ಬೆಲೆ, ಗುಣಮಟ್ಟಕ್ಕೆ ಅನುಗುಣವಾಗಿ 35-40 ರೂ.ಗೆ ತಲುಪಿದೆ, ಟಾಪ್ ಎಂಡ್ ಸೂಪರ್ಮಾರ್ಕೆಟ್‌ಗಳಲ್ಲಿ ಕೆಜಿಗೆ 45 ರೂಗಳಂತೆ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನಾದ್ಯಂತ ಚಿಲ್ಲರೆ ಅಂಗಡಿಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆಯಾಗಿದೆ.
ಈ ನಡುವೆ 5 ರಾಜ್ಯಗಳಲ್ಲಿ ಚುನಾವಣೆ ಇರುವ ಪರಿಣಾಮ ಬೆಲೆ ಏರಿಕೆ ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಅಧಿಕಾರಿಗಳು ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟದೊಂದಿಗೆ ಸರಣಿ ಸಭೆಗಳನ್ನು ನಡೆಸಿತು.