ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬೆಳ್ತಂಗಡಿ: 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ:ಆ 14.ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಏಕಾಏಕಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ.
ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ (19) ಅವರು ಆ.13 ರಂದು ಮೃತಪಟ್ಟ ಯುವತಿ.
ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆ.೯ ರಂದು ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಆ.೧೧ ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮತ್ತೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿದ್ದು ಈ ಹಿನ್ನಲೆ ಮನೆಗೆ ತೆರಳಿದ್ದರು. ಆದರೆ ಆ.೧೩ ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.