Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾಕಿಸ್ತಾನ ಸ್ಚಾರ್ ವೇಗಿ ವಹಾಬ್ ರಿಯಾಜ್ ನಿವೃತ್ತಿ ಘೋಷಣೆ

ಇಸ್ಲಾಮಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ವಹಾಬ್ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸುವ ನಿರ್ಧಾರ ಕೈಗೊಂಡಿದ್ದೇನೆ. ಆದರೆ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಂತೆಯೇ ಪಿಸಿಬಿ, ನನ್ನ ಕುಟುಂಬ, ತರಬೇತುದಾರರು, ಮಾರ್ಗದರ್ಶಕರು, ತಂಡದ ಸಹ ಆಟಗಾರರು, ಅಭಿಮಾನಿಗಳು ಮತ್ತು ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ಆದರೆ ಫ್ರಾಂಚೈಸಿ ಕ್ರಿಕೆಟ್ ಆಡುವುದನ್ನು ಮುಂದುವರೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಹಾಬ್ ತನ್ನ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಪಾಕಿಸ್ತಾನ ಪರ 27 ಟೆಸ್ಟ್, 91 ಏಕದಿನ ಮತ್ತು 36 ಟಿ20 ಪಂದ್ಯಗಳನ್ನು ಆಡಿದ್ದು, 2020 ರಲ್ಲಿ ವಹಾಬ್ ಪಾಕಿಸ್ತಾನ ತಂಡದ ಪರ ತಮ್ಮ ಕೊನೆಯ ಪಂದ್ಯವನ್ನಾಡಿದ್ದ ರಿಯಾಜ್, ಇತ್ತೀಚಿನ ಸಂದರ್ಶನವೊಂದರಲ್ಲಿ ವಿಶ್ವಕಪ್‌ನಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಆದರೆ ಇದೀಗ ನಿವೃತ್ತಿ ನಿರ್ಧಾರಕ್ಕೆ ಬಂದಿರುವ ರಿಯಾಜ್, 2023ರ ವಿಶ್ವಕಪ್ ಆಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ವಹಾಬ್ ಈ ಹಿಂದೆ 2011, 2015 ಮತ್ತು 2019ರ ವಿಶ್ವಕಪ್​ನಲ್ಲಿ ಪಾಕಿಸ್ತಾನ ಪರ ಆಡಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಪರ ವಹಾಬ್ ರಿಯಾಜ್ 34.50 ಸರಾಸರಿಯಲ್ಲಿ 83 ವಿಕೆಟ್‌ಗಳನ್ನು ಪಡೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 34.30 ಸರಾಸರಿಯಲ್ಲಿ 120 ವಿಕೆಟ್‌ಗಳನ್ನು ಪಡೆದಿರುವ ವಹಾಬ್, ಟಿ20ಯಲ್ಲಿ 28.55ರ ಸರಾಸರಿಯಲ್ಲಿ 34 ವಿಕೆಟ್ ಪಡೆದಿದ್ದಾರೆ.

No Comments

Leave A Comment