ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ನನಸಾಗದ ಸೇನೆ ಸೇರ್ಪಡೆ ಕನಸು – ಚಿಂತೆಯಲ್ಲಿ ಯುವಕ ಆತ್ಮಹತ್ಯೆ
ಬೆಳಗಾವಿ:ಆ 17: ಸತತ ಯತ್ನದ ನಂತರವೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೃತನನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ.
ಯುವಕ ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಕಂಡಿದ್ದು ಅದಕ್ಕಾಗಿ ತಯಾರಿ ನಡೆಸುತ್ತಿದ್ದನು. ಆತ ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯಲ್ಲಿ ಎರಡು ವರ್ಷ ಕೆಲಸ ಮಾಡಿದ್ದನು. ಈ ನಡುವೆ ಆತ ಸೇನೆಗೆ ಸೇರಲು ಹಲವು ಬಾರಿ ಮಾಡಿದ ಪ್ರಯತ್ನಗಳು ಕೈಗೂಡಿರಲಿಲ್ಲ
ಈ ನೂವನ್ನು ಸಹಿಸಲಾಗದ ಯುವಕ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಪ್ಪಾಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.