ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

40 ಪರ್ಸೆಂಟ್​ ಕಮಿಷನ್ ಆರೋಪ:​ ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್​ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಮೂಲಕ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ.

ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಡಿದ್ದ ಕಮಿಷನ್ ಆರೋಪದ ತನಿಖೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ಗುರುವಾರ ಆದೇಶ ಹೊರಡಿಸಿದೆ.

ರಾಜ್ಯ ಗುತ್ತಿಗೆದಾರರ ಸಂಘವು, ಎಲ್ಲ ಸಾರ್ವಜನಿಕ ಯೋಜನೆಗಳಲ್ಲಿ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂಗೆ ಪತ್ರ ಬರೆದಿತ್ತು.

ಕಾಮಗಾರಿ ಆರಂಭಕ್ಕೂ ಮುನ್ನವೇ ಜನ ಪ್ರತಿನಿಧಿಗಳಿಗೆ ಶೇ.25ರಿಂದ 30ರಷ್ಟು ಕಮಿಷನ್ ನೀಡಿದರೆ, ಉಳಿದ ಹಣವನ್ನು ಕಾಮಗಾರಿ ಮುಗಿದ ನಂತರ ಪಾವತಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಆದಾಗ್ಯೂ, ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ.

ನಿಯಮಗಳು ಮತ್ತು ಕಾಮಗಾರಿಗಳ ಗುಣಮಟ್ಟದ ಪ್ರಕಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆಯೇ ಎಂದು ಆಯೋಗವು ತನಿಖೆ ನಡೆಸಲಿದೆ.

No Comments

Leave A Comment