ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಅಮೆರಿಕದಲ್ಲಿ ದಾವಣಗೆರೆ ಮೂಲದ ಟೆಕ್ಕಿ ದಂಪತಿ, ಮಗು ನಿಗೂಢ ಸಾವು

ದಾವಣಗೆರೆ: ದಾವಣಗೆರೆ ಮೂಲದ ಟೆಕ್ಕಿ ದಂಪತಿ ಹಾಗೂ ಅವರ ಪುತ್ರ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ನಡೆದಿದೆ.

ಮೃತರನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಎಂದು ಗುರುತಿಸಲಾಗಿದೆ.

ಒಂದೇ ಕುಟುಂಬದ ಮೂವರ ಸಾವು ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದು, ಸಾವಿಗೆ ನಿಖರ ಕಾರಣ ತಿಳಿಸುವಂತೆ ಮತ್ತು ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ಕುಟುಂಬ ಸರ್ಕಾರಕ್ಕೆ ಮನವಿ ಮಾಡಿದೆ.

No Comments

Leave A Comment