ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಚಂದ್ರಯಾನ ಕೈಗೊಂಡಿದ್ದ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆ ಚಂದ್ರನ ಮೇಲ್ಮೈ ಮೇಲೆ ಪತನ

ಮಾಸ್ಕೋ: ಇಸ್ರೋದ ಚಂದ್ರಯಾನ-3 ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನ ನೌಕೆ ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ಪತನವಾಗಿದೆ.

ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ರಷ್ಯಾದ ‘ಲೂನಾ –25’ ಬಾಹ್ಯಾಕಾಶ ನೌಕೆ ಪತನಗೊಂಡಿದೆ. ಚಂದ್ರನಲ್ಲಿ ಘನೀಕರಣಗೊಂಡಿರುವ ನೀರು ಮತ್ತು ಅಮೂಲ್ಯ ಅಂಶಗಳಿರುವ ಕುರಿತು ಅನ್ವೇಷಣೆ ನಡೆಸಲು ಉದ್ದೇಶದಿಂದ ‘ಲೂನಾ–25’ ನೌಕೆಯನ್ನು ಆಗಸ್ಟ್‌ 11ರಂದು ರಷ್ಯಾ ಉಡಾವಣೆ ಮಾಡಿತ್ತು. ನೌಕೆಯು ಸೋಮವಾರ(ಆಗಸ್ಟ್‌ 21) ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಮಯ ನಿಗದಿ ಮಾಡಲಾಗಿತ್ತು.

‘ಆಗಸ್ಟ್‌ 21ಕ್ಕೆ ಚಂದ್ರನ ಮೇಲೆ ನೌಕೆಯನ್ನು ಇಳಿಸಲು ಯೋಜಿಸಲಾಗಿತ್ತು. ಇದರನ್ವಯ ಶನಿವಾರ ಫ್ರೀ ಲ್ಯಾಂಡಿಂಗ್‌ ಕಕ್ಷೆಗೆ ನೌಕೆಯನ್ನು ತರುವ ಕೆಲಸ ನಡೆದಿತ್ತು. ಸುಮಾರು 11 ಗಂಟೆಯ ವೇಳೆ ನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಯೋಜಿತ ಕಕ್ಷಗೆ ನೌಕೆಯು ಹೋಗಲು ವಿಫಲವಾಗಿದ್ದು, ಪತನಗೊಂಡಿದೆ’ ಎಂದು ರಷ್ಯಾದ ಬಾಹ್ಯಾಕಾಶ ಸಂಸ್ಥೆ ‘ರೊಸ್ಕೋಸ್ಮಾಸ್’ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದರಿಂದ ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್‌ ಲ್ಯಾಂಡ್‌ ಮಾಡಿದ ಮೊದಲ ರಾಷ್ಟ್ರವಾಗಬೇಕು ಎಂಬ ರಷ್ಯಾದ ಕನಸು ಭಗ್ನವಾಗಿದೆ. ಭಾರತದ ಚಂದ್ರಯಾನ–3 ನೌಕೆ ಬುಧವಾರ(ಆಗಸ್ಟ್‌ 23) ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್‌ ಮಾಡಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಪ್ರಕಾರ, ಚಂದ್ರಯಾನ-3 ಆಗಸ್ಟ್ 23, 2023 (ಬುಧವಾರ), ಸಂಜೆ 6-04ಕ್ಕೆ ಚಂದ್ರನ ಮೇಲೆ ಇಳಿಯಲಿದೆ. ಇದು ಸಾಧ್ಯವಾದರೆ ಅಮೆರಿಕ, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಕೀರ್ತಿಗೆ ಭಾರತ ಭಾಜನವಾಗಲಿದೆ.

No Comments

Leave A Comment