ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಪ್ರವಾಹದಿಂದ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ನೆರವು: 15 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ. ಕರ್ನಾಟಕದ ಜನರು ಹಿಮಾಚಲ ಪ್ರದೇಶದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾರೆ ಎಂದು ಹೇಳಿದ್ದಾರೆ.

ಛತ್ತೀಸ್ ಗಢ ಸರ್ಕಾರ ಕೂಡಾ ಹಿಮಾಚಲ ಪ್ರದೇಶಕ್ಕೆ ನೆರವು ನೀಡಿದ್ದು, ವಿಪತ್ತು ಸಂತ್ರಸ್ತರ ಪರಿಹಾರ ಮತ್ತು ಪುನವರ್ಸತಿಗಾಗಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು 11 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. ಅದೇ ರೀತಿ ರಾಜಸ್ಥಾನ ಸರ್ಕಾರ ಕೂಡಾ 15 ಕೋಟಿ ರೂ. ಆರ್ಥಿಕ ನೆರವನ್ನು ಹಿಮಾಚಲ ಪ್ರದೇಶಕ್ಕೆ ನೀಡಿದೆ.

No Comments

Leave A Comment