ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಶಿಶಿರನ ಸ್ಪರ್ಶಿಸಿದ ವಿಕ್ರಮ – ಇತಿಹಾಸ ಬರೆದ ಭಾರತ-ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ವೇಳೆ ತೆಗೆದ ಚಿತ್ರಗಳನ್ನು ಬಿಡುಗಡೆ ಮಾಡಿದ ಇಸ್ರೋ
ಬೆಂಗಳೂರು: ಆ, 23: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದೆ.
ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದೆ.
ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ.
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯು ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಕೆಲವೇ ನಿಮಿಷಗಳ ಮುನ್ನ ತೆಗೆದ ಚಿತ್ರಗಳನ್ನು ಬುಧವಾರ ಬಿಡುಗಡೆ ಮಾಡಿದೆ.
ಚಂದ್ರಯಾನ-3 ರ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಲ್ಯಾಂಡಿಂಗ್ ವೇಳೆ ತೆಗೆದ ಚಂದ್ರನ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.
CH-3 ಲ್ಯಾಂಡರ್ ಮತ್ತು ಬೆಂಗಳೂರಿನ MOX-ISTRAC ನಡುವೆ ಸಂವಹನ ಸಂಪರ್ಕ ಸಾಧಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಚಂದ್ರಯಾನ 3 ಮಿಷನ್‌ನಲ್ಲಿ ದ್ವಿಮುಖ ಸಂವಹನ ಸೌಲಭ್ಯವಿದೆ. ಒಂದು ಚಂದ್ರಯಾನ 2 ಆರ್ಬಿಟರ್‌ನೊಂದಿಗೆ, ಎರಡನೆಯದು ನೇರವಾಗಿ ಇಸ್ರೋ ಕಮಾಂಡ್ ಸೆಂಟರ್‌ನೊಂದಿಗೆ ಸಂಪರ್ಕ ಹೊಂದಿದೆ.
ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯನ್ನು ಸ್ಪರ್ಶಿಸಿದ ನಂತರ ವಿಕ್ರಮ್ ಲ್ಯಾಂಡರ್ ಹಂಚಿಕೊಂಡ ಮೊದಲ ಚಿತ್ರ ಇದಾಗಿದೆ.