Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ವಯನಾಡ್: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಜೀಪ್, 9 ಸಾವು

ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಉರುಳಿಬಿದ್ದು 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.

ಇಂದು ಮಧ್ಯಾಹ್ನ 3.30ರ ಸುಮಾರಿಗೆ ತಲಪ್ಪುಳ ಕನ್ನೋತ್ಮಾಲಾ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಆರು ಮಹಿಳೆಯರು ಸೇರಿದಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಯನಾಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೀಪು ಟೀ ಟ್ರೇಡಿಂಗ್ ಕಂಪನಿಗೆ ಸೇರಿದ 12 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಜೀಪ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 30 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದ ಮೇರೆಗೆ ಕೋಯಿಕ್ಕೋಡ್‌ನಲ್ಲಿರುವ ಅರಣ್ಯ ಸಚಿವ ಎಕೆ ಶಶೀಂದ್ರನ್ ಅವರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಲು ವಯನಾಡ್‌ಗೆ ತೆರಳಿದ್ದಾರೆ. ಅಪಘಾತದ ವರದಿ ತೀವ್ರ ದುಃಖ ತಂದಿದೆ ಎಂದು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment