ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕಾವೇರಿ ವಿವಾದ: ಪ್ರಾಧಿಕಾರದ ಆದೇಶಕ್ಕೆ ಮಣಿದ ಸರ್ಕಾರ, ವಿರೋಧದ ನಡುವೆಯೂ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ

ಮೈಸೂರು: ಮಳೆಯಿಲ್ಲದೆ ರಾಜ್ಯ ಸಂಕಷ್ಟಕ್ಕೆ ಸಿಲುಕಿದ್ದರೂ, ವಿರೋಧ ನಡುವಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ, ಬುಧವಾರದಿಂದಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವುದನ್ನು ಆರಂಭಿಸಿದೆ.

ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರಾವರಿ ಪ್ರಾಧಿಕಾರ ಆದೇಶ ಹಿನ್ನಲೆ ಕೆಆರ್​ಎಸ್​ ಡ್ಯಾಂನಿಂದ ನದಿಗೆ ನೀರು ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಾಧಿಕಾರದ ಆದೇಶವನ್ನು ಪಾಲನೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರ, ನಿತ್ಯ 5 ಸಾವಿರ ಕ್ಯೂಸೆಕ್ ನೀರಿನಂತೆ, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬೇಕಿದೆ.

ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ನೀರಾವರಿ ಇಲ್ಲಾಖೆ ಇದಕ್ಕಾಗಿ, ಕೃಷ್ಣರಾಜ ಜಲಾಶಯದಿಂದ 4,398 ಕ್ಯೂಸೆಕ್ಸ್ ನೀರು ಹಾಗೂ ಕಬಿನಿ ಜಲಾಶಯದಿಂದ 2,000 ಕ್ಯೂಸೆಕ್ಸ್ ನೀರನ್ನು ಮಂಗಳವಾರ ರಾತ್ರಿಯಿಂದಲೇ ತಮಿಳುನಾಡಿಗೆ ಬಿಡುಗಡೆ ಮಾಡುತ್ತಿದೆ. ಕೆಆರ್‌ಎಸ್‌ನಲ್ಲಿ 24 ಟಿಎಂಸಿ ಅಡಿ ನೀರು ಮತ್ತು ಕಬಿನಿಯಲ್ಲಿ 13 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ ಎಂದು ತಿಳಿದುಬಂದಿದೆ.

ಮುಂದಿನ 15 ದಿನಗಳ ವರೆಗೆ ತಮಿಳುನಾಡಿಗೆ ದಿನಕ್ಕೆ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡುತ್ತಿದ್ದಂತೆಯೇ ಸರ್ಕಾರ ರಾಜ್ಯದ ವಾಸ್ತವಿಕ ಸ್ಥಿತಿಯನ್ನು ಪ್ರಾಧಿಕಾರಿಕ್ಕೆ ತಿಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಜ್ಯದ ರೈತರ ಹಿತ ರಕ್ಷಿಸಲು ಹಾಗೂ ಕುಡಿಯುವ ನೀರಿನ ಅಗತ್ಯಗಳ ಪೂರೈಸಲು ಸರ್ಕಾರ ಕಾನೂನು ಹೋರಾಟ ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಕೆಆರ್‌ಎಸ್‌ನಿಂದ ನೀರು ಬಿಡುವುದನ್ನು ವಿರೋಧಿಸಿ ಕಳೆದ ರಾತ್ರಿ ಮಂಡ್ಯದಲ್ಲಿ ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ರೈತರ ಹಿತಾಸಕ್ತಿಗೆ ಸರ್ಕಾರ ದ್ರೋಹ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಂದಾಯ ಇಲಾಖೆಯು ಭೂ ದಾಖಲೆಗಳು ಮತ್ತು ಮ್ಯುಟೇಶನ್ ಡೇಟಾವನ್ನು ಗ್ರಾಮೀಣ ಇಲಾಖೆ, ಪುರಸಭೆ, ಮತ್ತು ಆಡಳಿತ ಮತ್ತು ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಗಳಂತಹ ಇಲಾಖೆಗಳೊಂದಿಗೆ ಹಂಚಿಕೊಳ್ಳಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇಲಾಖೆಯ ಈ ನಿರ್ಧಾರವು ರಸ್ತೆಗಳು, ಸಾರ್ವಜನಿಕ ಉಪಯುಕ್ತತೆಗಳು, ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳ ಭೂ ವಿವರಗಳ ತಡೆರಹಿತ ಪ್ರವೇಶಕ್ಕೆ ಸಹಾಯಕವಾಗಲಿದೆ.

ಸೆ,12ರವರೆಗೆ 15 ದಿನಗಳ ಕಾಲ ಕರ್ನಾಟಕ-ತಮಿಳುನಾಡು ಗಡಿಯಲ್ಲಿನ ಬಿಳಿಗೊಂಡ್ಲು ಜಲಾಶಯಕ್ಕೆ ಪ್ರತಿದಿನ 5,000 ಕ್ಯುಸೆಕ್ಸ್ ಕಾವೇರಿ ನೀರನ್ನು ಬಿಡುಗಡೆಗೊಳಿಸುವಂತೆ ಸಿಡಬ್ಲುಎಂಎ ಮಂಗಳವಾರ ಕರ್ನಾಟಕಕ್ಕೆ ನಿರ್ದೇಶ ನೀಡಿತ್ತು.

ಕರ್ನಾಟಕವು ಇದನ್ನು ಬಲವಾಗಿ ವಿರೋಧಿಸಿತ್ತಾದರೂ 5,000 ಕ್ಯುಸೆಕ್ಸ್ ನೀರು ಬಿಡುಗಡೆಗೆ ಕಾವೇರಿ ಜಲ ನಿಯಂತ್ರಣ ಸಮಿತಿಯ ಶಿಫಾರಸುಗಳನ್ನು ಸಿಡಬ್ಲುಎಂಎ ಎತ್ತಿ ಹಿಡಿದಿತ್ತು.

ತಮಿಳುನಾಡಿಗೆ ನೀರನ್ನು ಬಿಡುಗಡೆಗೊಳಿಸಿದರೆ ಪ್ರತಿಭಟನೆಯನ್ನು ಆರಂಭಿಸುವುದಾಗಿ ವಿವಿಧ ರೈತ ಸಂಘಟನೆಗಳು ಬೆದರಿಕೆಯೊಡ್ಡಿವೆ. ಈ ನಡುವಲ್ಲೇ ಸಿಡಬ್ಲುಎಂಎ ನಿರ್ದೇಶನಗಳನ್ನು ಪಾಲಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಸರ್ವೋಚ್ಛ ನ್ಯಾಯಾಲಯ ಬೀಸುವ ಚಾಟಿ ಏಟನ್ನು ತಪ್ಪಿಸಿಕೊಳ್ಳಲು ಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಕಾವೇರಿ ಜಲ ವಿವಾದವು ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಇದೆ ಮತ್ತು ಈ ವಾರದಲ್ಲಿ ವಿಚಾರಣೆಗೆ ಬರಲಿದೆ ಎನ್ನಲಾಗಿದೆ.

kiniudupi@rediffmail.com

No Comments

Leave A Comment