Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

5 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ – 63 ಮಂದಿ ಸಾವು

ಕೇಪ್‌ಟೌನ್ :ಆ 31. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಗ್ನಿಶಾಮಕ ದಳ ಹಾಗೂ ತುರ್ತು ವಾಹನಗಳು ಕಾರ್ಯಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಸುಮಾರು 200 ಜನರು ಕಟ್ಟಡದಲ್ಲಿ ವಾಸವಿದ್ದರು ಎನ್ನಲಾಗಿದೆ. ಆದರೆ ಬೆಂಕಿ ಅನಾಹುತಕ್ಕೆ ಕಾರಣ ಹಾಗೂ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ.

No Comments

Leave A Comment