Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ಮಲಯಾಳಂ ನಟಿ ಅಪರ್ಣಾ ಪಿ. ನಾಯರ್ ಶವ ಪತ್ತೆ

ತಿರುವನಂತಪುರಂ: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ (31) ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.

ಮೇಘತೀರ್ಥಂ, ಮುದ್ದುಗೌವ್, ಅಚಾಯನ್ಸ್, ಕೊಡತಿ ಸಮಕ್ಷಂ ಬಾಲನ್ ವಕೀಲ್, ಕಲ್ಕಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಪರ್ಣಾ ನಟಿಸಿದ್ದಾರೆ. ಚಂದನಮಜ, ಆತ್ಮಸಖಿ ಸೇರಿದಂತೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಅವರು ತ್ರಯಾ ಮತ್ತು ಕೃತಿಕಾ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನೆ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಾರದ ಹಿಂದೆ ಪತಿ ಸಂಜಿತ್‌ ಜೊತೆಗೆ ತೆಗೆಸಿದ ಫೋಟೋ ಹಂಚಿಕೊಂಡು ‘ಇವರು ನನ್ನ ಶಕ್ತಿ’ ಎಂದು ಬರೆದುಕೊಂಡಿದ್ದರು. ಆಕೆ ಇತ್ತೀಚೆಗೆ ಹಂಚಿಕೊಂಡ ಯಾವ ಫೋಟೋಗಳಲ್ಲೇ ಆಗಲೀ ಆಕೆ ನೋವಿನಲ್ಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. 2 ದಿನಗಳ ಹಿಂದಷ್ಟೇ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಅಪರ್ಣಾ, ಹೀಗೆ ಆತ್ಮಹತ್ಯೆಯಂಥ ನಿರ್ಧಾರ ಮಾಡಿದ್ದೂ ಏಕೆ ಎಂಬುದು ಪ್ರಶ್ನೆಯಾಗಿ ಉಳಿದಿದೆ.

No Comments

Leave A Comment