ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ

ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಹೀತ್ ಸ್ಟ್ರೀಕ್ ಅವರ ಪತ್ನಿ ನಾಡಿನ್ ಸ್ಟ್ರೀಕ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅವರ ನಿಧನವನ್ನು ಖಚಿತಪಡಿಸಿದ್ದಾರೆ. ಮೇ ತಿಂಗಳ ಆರಂಭದಲ್ಲಿ, ಸ್ಟ್ರೀಕ್ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ದಕ್ಷಿಣ ಆಫ್ರಿಕಾದ ಪ್ರಸಿದ್ಧ ಆಂಕೊಲಾಜಿಸ್ಟ್ ಒಬ್ಬರ ಅಡಿಯಲ್ಲಿ “ಚಿಕಿತ್ಸೆ ಪಡೆಯುತ್ತಿದ್ದರು” ಎಂದು ವರದಿಯಾಗಿದೆ.

ಜಿಂಬಾಬ್ವೆ ಪರ 65 ಟೆಸ್ಟ್ ಮತ್ತು 189 ಏಕದಿನ ಪಂದ್ಯಗಳನ್ನಾಡಿರುವ ಸ್ಟ್ರೀಕ್ ಕ್ರಮವಾಗಿ 1990 ಮತ್ತು 2943 ರನ್ ಗಳಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 216 ವಿಕೆಟ್ ಮತ್ತು ಏಕದಿನದಲ್ಲಿ 239 ವಿಕೆಟ್ ಗಳನ್ನು ಪಡೆದಿದ್ದಾರೆ ಮತ್ತು ಎರಡೂ ಸ್ವರೂಪಗಳಲ್ಲಿ ಜಿಂಬಾಬ್ವೆಯ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

No Comments

Leave A Comment