ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸೂರ್ಯಯಾನ: ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ
ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯಾ ಎಲ್ 1 ನ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿಯಾಗಿದೆ.
ಹೌದು.. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ. ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ನಲ್ಲಿ ಇಸ್ರೋ ಈ ಬಗ್ಗೆ ಮಾಹಿತಿ ನೀಡಿದ್ದು, ಆದಿತ್ಯ L1 ನೌಕೆಯ ಮೊದಲ ಭೂ-ಆಧಾರಿತ ಕುಶಲತೆ (ಮೆನೋವರ್)ಯನ್ನು ಯಶಸ್ವಿಯಾಗಿ ನಿರ್ವಹಿಸಲಾಯಿತು ಎಂದು ತಿಳಿಸಿದೆ.
ಈ ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿರುವ ಟೆಲಿಮೆಟ್ರಿ, ಟ್ರ್ಯಾಂಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ಐಎಸ್‌ಟಿಆರ್‌ಎಸಿ) ಕೇಂದ್ರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಬಾಹ್ಯಾಕಾಶ ನೌಕೆ ಸುಸ್ಥಿತಿಯಲ್ಲಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.
ಬಾಹ್ಯಾಕಾಶ ನೌಕೆ ಈಗ 245 ಕಿ.ಮೀ x 22459 ಕಿ.ಮೀ. ಕಕ್ಷೆ ತಲುಪಿದ್ದು, ಮುಂದಿನ ಹಂತದ ಕಕ್ಷೆ ಬದಲಾವಣೆ ಸೆಪ್ಟೆಂಬರ್ 05, ಮಂಗಳವಾರ 3 ಗಂಟೆಗೆ ನಿಗದಿಯಾಗಿದೆ. ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್1 ವೀಕ್ಷಣಾಲಯವನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಶನಿವಾರ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.
ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ ಎಲ್–1 ಅಂತರಿಕ್ಷ ವೀಕ್ಷಣಾಲಯವನ್ನುಇರಿಸಲಾಗುವುದು. 125 ದಿನಗಳಲ್ಲಿ ಎಲ್–1 ಬಿಂದುವಿಗೆ ಸೇರಿಸಲಾಗುತ್ತದೆ.