ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾವೇರಿ ವಿವಾದ: ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ, ಕಾವೇರಿ ನದಿಗಿಳಿದು ಕನ್ನಡ ಸಂಘಟನೆಗಳಿಂದ ಸರ್ಕಾರದ ವಿರುದ್ಧ ಆಕ್ರೋಶ
ಮೈಸೂರು: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ.
ರೈತರ ಪ್ರತಿಭಟನೆಯೊಂದಿಗೆ ರಾಜ್ಯದ ಕನ್ನಡಪರ ಸಂಘಟನೆಗಳು ಕೈಜೋಡಿಸಿದ್ದು, ಶ್ರೀರಂಗಪಟ್ಟಣದ ಹನುಮಂತನಗರದಲ್ಲಿ ವಿನೂತನ ರೀತಿಯಲ್ಲಿ ನಡೆಸಿದ್ದಾರೆ. ಮಿನರಲ್ ವಾಟರ್‌ನಲ್ಲಿ ಭತ್ತದ ಪೈರು ನಾಟಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಅಲ್ಲದೆ, ಕೆಲ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನದಿಗಿಳಿದು, ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಈ ನಡುವೆ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಕನ್ನಡ ಪರ ಸಂಘಟನೆಯ ಕೆಲ ಕಾರ್ಯಕರ್ತರು ಕಾವೇರಿ ಮಾತೆಗೆ ಅಭಿಷೇಖ ಮಾಡಿ, ಪೂಜೆ ಸಲ್ಲಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.