Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕುತೂಹಲ ಮೂಡಿಸಿದ ಡಿಕೆಶಿ – ತೇಜಸ್ವಿನಿ ಅನಂತಕುಮಾರ್‌ ಭೇಟಿ

ಬೆಂಗಳೂರು:ಸೆ 04. ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ತೇಜಸ್ವಿನಿ ಅನಂತ ಕುಮಾರ್‌ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದು, ರಾಜಕೀಯವಾಗಿ ಅದು ಬಹಳ ಕುತೂಹಲ ಮೂಡಿಸಿದೆ.

ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಅನಂತಕುಮಾರ್‌ ಅವರು ಅಗಲಿದ ಬಳಿಕ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿ ತೇಜಸ್ವಿನಿ ಪ್ರತಿಕ್ರಿಯಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್‌ ಅವರನ್ನು ತೇಜಸ್ವಿನಿ ಅವರು ಭೇಟಿಯಾಗಿರುವುದು ಸಾಕಷ್ಟು ಊಹಾಪೂಹಗಳಿಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ವಾಸ್ತವದಲ್ಲಿ ಈ ಭೇಟಿ ಹಿಂದೆ ರಾಜಕೀಯ ಉದ್ದೇಶ ಅಡಗಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

No Comments

Leave A Comment