ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ: ರಾಹುಲ್, ಸೂರ್ಯಕುಮಾರ್ ಗೆ ಸ್ಥಾನ

ನವದೆಹಲಿ: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾ ಆಟಗಾರರ ತಂಡ ಪ್ರಕಟಿಸಿದೆ.

ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕ್ಯಾಂಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜೊತೆಯಾಗಿ ತಂಡವನ್ನು ಪ್ರಕಟಿಸಿದ್ದಾರೆ. ಕೆಎಲ್ ರಾಹುಲ್ ಭಾರತ ತಂಡದ ಪ್ರಮುಖ ವಿಕೆಟ್-ಕೀಪರ್ ಬ್ಯಾಟರ್ ಆಗಿ ಆಯ್ಕೆ ಆಗಿದ್ದು, ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ.

ಏಷ್ಯಾಕಪ್ 2023 ಕ್ಕಾಗಿ ಪ್ರಸ್ತುತ ಶ್ರೀಲಂಕಾದಲ್ಲಿರುವ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಭಾರತ ತಂಡದ ವಿಶ್ವಕಪ್ ಪಟ್ಟಿಯಿಂದ ಹೊರಗುಳಿದಿದ್ದಾರೆ. ಭರ್ಜರಿ ಫಾರ್ಮ್​ನಲ್ಲಿರುವ ಇಶಾನ್ ಕಿಶನ್ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ. ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ವಾಷಿಂಗ್ಟನ್ ಸುಂದರ್ ಮತ್ತು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಬ್ಬರನ್ನೂ ಕೈಬಿಡಲಾಗಿದೆ. ಆಲ್‌ರೌಂಡರ್‌ಗಳಾದ ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಂಡದಲ್ಲಿದ್ದಾರೆ.

ಭಾರತದ ವಿಕೆಟ್ ಕೀಪರ್-ಬ್ಯಾಟರ್ ಕೆ.ಎಲ್. ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗಾಯದ ಸಮಸ್ಯೆಯ ಕಾರಣಕ್ಕೆ ರಾಹುಲ್ ಅವರು ಆಸ್ಟ್ರೇಲಿಯ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ , ವೆಸ್ಟ್ ಇಂಡೀಸ್ ವಿರುದ್ಧದ ಎಲ್ಲ 3 ಮಾದರಿಯ ಸರಣಿಯಿಂದ ಹೊರಗುಳಿದಿದ್ದರು. ಗಾಯದಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಅವರನ್ನು ಏಶ್ಯಕಪ್ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಅವರು ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈಗ ನಡೆಯುತ್ತಿರುವ ಏಶ್ಯಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಹೊಸ ಮುಖ ತಿಲಕ್ ವರ್ಮಾ ಹಾಗೂ ವೇಗದ ಬೌಲರ್ ಪ್ರಸಿದ್ದ ಕೃಷ್ಣ ರನ್ನು ವಿಶ್ವಕಪ್ ತಂಡದಿಂದ ಕೈಬಿಡಲಾಗಿದೆ.

ರಾಹುಲ್ ಜೊತೆಗೆ ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಏಷ್ಯಾಕಪ್ ಗಾಗಿ ತಂಡದಲ್ಲಿ ಮೊದಲ ಬಾರಿ ಸ್ಥಾನ ಪಡೆದಿದ್ದ ತಿಲಕ್ ವರ್ಮಾ ಹಾಗೂ ವೇಗದ ಬೌಲರ್ ಪ್ರಸಿದ್ಧ ಕೃಷ್ಣ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯದ ಸ್ಪಿನ್ನರ್ ಯಜುವೇಂದ್ರ ಚಹಾಲ್ ವಿಶ್ವಕಪ್ ತಂಡದಿಂದಲೂ ಹೊರಗುಳಿದಿದ್ದಾರೆ. 50 ಓವರ್ ಮಾದರಿಯಲ್ಲಿ ರನ್ ಗಾಗಿ ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತನ್ನ ಸ್ಥಾನ ಉಳಿಸಿಕೊಂಡಿದ್ದಾರೆ.

No Comments

Leave A Comment