ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಎಸ್‌ಪಿಜಿ ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ನಿಧನ

ನವದೆಹಲಿ: ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಅವರು ಬುಧವಾರ ಗುರುಗ್ರಾಮ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

1987ರ ಬ್ಯಾಚ್‌ನ ಕೇರಳ ಕೇಡರ್‌ನ ಐಪಿಎಸ್ ಅಧಿಕಾರಿ ಸಿನ್ಹಾ ಅವರು ಕಳೆದ ಮೇ 31 ರಂದು ನಿವೃತ್ತಿಯಾಗಿದ್ದು, ಅವರ ಸೇವೆಯನ್ನು ಒಂದು ವರ್ಷ ವಿಸ್ತರಿಸಲಾಗಿತ್ತು.

ಅರುಣ್ ಕುಮಾರ್ ಸಿನ್ಹಾ ಅವರು 2016 ರಿಂದ ಎಸ್‌ಪಿಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿಗಳ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದರು.

No Comments

Leave A Comment