Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

2ಎ ಮೀಸಲಾತಿಗೆ ಆಗ್ರಹ: ಸೆ.10ರಿಂದ ಮತ್ತೆ ಹೋರಾಟಕ್ಕೆ ಪಂಚಮಸಾಲಿ ಸಮುದಾಯ ಮುಂದು!

ಬೆಳಗಾವಿ: 2ಎ ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೇರವೇರಿಸಿ ಹೋರಾಟ ಆರಂಭ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ಸೆ.10 ರಂದು ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಇಷ್ಟಲಿಂಗ ಪೂಜೆ ಮಾಡಲಾಗುವುದು. ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕು. ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ. ಸೆ.10 ರಂದು ವೀರಶೈವ ಲಿಂಗಾಯತ ಸಮುದಾಯವರು ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವ ಕಾರಣ ನಮ್ಮನ್ನು ಯಾರೂ ನಿರ್ಲಕ್ಷಿಸಲು ಸಾಧ್ಯವಿಲ್ಲ. 2024ರ ವೇಳೆಗೆ ನಮಗೆ ಮೀಸಲಾತಿ ನೀಡಬೇಕು. 2ಎ ಮೀಸಲಾತಿಗೆ ಕಾನೂನಾತ್ಮಕ ಸಮಸ್ಯೆಯಿದ್ದರೆ, ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

No Comments

Leave A Comment