ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು: ಪಾಲಿಕೆ ನೂತನ ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಆಗಿ ಸುನೀತಾ ಆಯ್ಕೆ

ಮಂಗಳೂರು: ಸೆ 08. ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ.

kiniudupi@rediffmail.com

No Comments

Leave A Comment