ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಭಾರೀ ಮಳೆಯ ನಂತರ ಜಿ-20 ವೇದಿಕೆ ‘ಭಾರತ್ ಮಂಟಪ’ ಜಲಾವೃತ, ಅಭಿವೃದ್ಧಿ ಈಜುತ್ತಿದೆ ಎಂದ ಕಾಂಗ್ರೆಸ್- ವಿಡಿಯೋ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯ ನಂತರ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಮತ್ತೊಂದು ಅಸ್ತ್ರವಾದಂತಾಗಿದೆ. ಭಾರತ ಮಂಟಪ ಜಲಾವೃತದ ದೃಶ್ಯವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಕ್ ಪ್ರಹಾರ ನಡೆಸುತ್ತಿದೆ.
ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳುವ ಮೂಲಕ ಪ್ರಗತಿಯ ಪೊಳ್ಳು ಭರವಸೆಗಳು ಸ್ಪಷ್ಟವಾಗಿವೆ. ರೂ. 2,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ವೇದಿಕೆ ಕೇವಲ ಒಂದು ದಿನದ ಮಳೆಗೆ ಜಲಾವೃತವಾಗಿದೆ ಎಂದು ಟೀಕಿಸಿದ್ದಾರೆ. ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ, ಕೇಂದ್ರದ ಭರವಸೆಗಳನ್ನು ಉಲ್ಲೇಖಿಸಿ ಅಭಿವೃದ್ಧಿ ಈಜುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ಈ ನಡುವೆ ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ತೀವ್ರತೆಯ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಕಚೇರಿ ಮುನ್ಸೂಚನೆ ನೀಡಿದೆ.