Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಸ್ವಾಗತ ಸಮಿತಿ ಕಾರ್ಯಾಲಯ ಹಾಗೂ ಲಾಂಛನವನ್ನು ಬಿಡುಗಡೆಗೊಳಿಸಲು ಡಾ.ಡಿ.ವಿ.ಎಚ್ ರವರಿಗೆ ಮನವಿ

ಉಡುಪಿ:ಶ್ರೀ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯು ಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ರಾಜರ್ಷಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆದೇಶದಂತೆ ತಮ್ಮ ಚತುರ್ಥ ಪರ್ಯಾಯದ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸುವಂತೆ ಹಾಗೂ ಇದೆ ದಿನಾಂಕ 16.9.23.ರ ಸಂಜೆ 4 ಗಂಟೆಗೆ ಉಡುಪಿಗೆ ಬಂದು ಸ್ವಾಗತ ಸಮಿತಿ ಕಾರ್ಯಾಲಯವನ್ನು ಹಾಗೂ ಲಾಂಛನವನ್ನು ಬಿಡುಗಡೆಗೊಳಿಸುವಂತೆ ವಿನಂತಿಸಕೊಳ್ಳಲಾಯಿತು.

ಮಠದ ದಿವಾನರಾದ ನಾಗರಾಜ ಆಚಾರ್ಯರು, ಸಮಿತಿಯ ಕಾರ್ಯಾಧ್ಯಕ್ಷ ರಾದ ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕರಾದ ಜಯಕರ್ ಶೆಟ್ಟಿ, ಸಂತೋಷ್ ಶೆಟ್ಟಿ, ನಯೇಶ್ ಶೆಟ್ಟಿ, ರಮೇಶ್ ಭಟ್ ಕೆ, ರವೀಂದ್ರ ಆಚಾರ್ಯ ಉಪಸ್ಥಿತರಿದ್ದರು.

No Comments

Leave A Comment