ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!

ಮಣಿಪುರ: ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ನಡುವಿನ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದಾರೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೆ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮೇ.03 ರಿಂದ ಆರಂಭವಾದ ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 160 ಮಂದಿ ಸಾವನ್ನಪ್ಪಿದ್ದಾರೆ.

ಮಣಿಪುರದಲ್ಲಿ ಮೈತೆ ಸಮುದಾಯದವರು ಶೇ.’53 ರಷ್ಟಿದ್ದು, ಇಂಫಾಲ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗ, ಕುಕಿ ಸಮುದಾಯಗಳು ಶೇ.40 ರಷ್ಟಿದ್ದು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿದ್ದಾರೆ.

No Comments

Leave A Comment