Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಂಗಳೂರು: ಚಾಮರಾಜಪೇಟೆ ವಿನಾಯಕ ಥಿಯೇಟರ್ ಬಳಿ ಅಗ್ನಿ ಅವಘಡ, 8 ಮನೆ ಬೆಂಕಿಗಾಹುತಿ, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ(vinayaka theater) ಬಳಿ ಇರುವ ಗೋದಾಮಿನಲ್ಲಿ ಅಗ್ನಿ(Fire) ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಸಿಲಿಂಡರ್ ಸ್ಫೋಟದಿಂದ ಬೆಂಕಿ
ಗೋದಾಮಿನಲ್ಲಿ ಎರಡು ಸಿಲಿಂಡರ್​ಗಳು ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದಲ್ಲಿ ಗಾಯೊಂಡಿರುವ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ಈ ಅಗ್ನಿ ಅವಘಡದ ಬಗ್ಗೆ ಪ್ರತ್ಯಕ್ಷದರ್ಶಿ ಸೈಯ್ಯದ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಸಾಕೆಟ್ ಬೋರ್ಡ್​ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಮಹಿಳೆಯರು ಬೆಂಕಿ ಹೊತ್ತಿದ್ದ ಬಗ್ಗೆ ಮನೆಯಿಂದ ಹೊರಗೆ ಓಡಿ ಬಂದು ನನಗೆ ಮಾಹಿತಿ ನೀಡಿದರು. ಅಷ್ಟರಲ್ಲಿ ಮನೆಯಲ್ಲಿದ್ದ ಸಿಲಿಂಡರ್​​ ಸ್ಫೋಟದ ಜೊತೆ ಬೆಂಕಿ ಹರಡಿತ್ತು. ತಕ್ಷಣ ಅಗ್ನಿಶಾಮಕ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಎಲ್ಲರೂ ಹೊರಗೆ ಓಡಿ ಬಂದಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಮಾಹಿತಿ ನೀಡಿದರು.

No Comments

Leave A Comment