Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಳೆ ಇಲ್ಲದೆ ರೈತರು ಕಂಗಾಲು: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲಿ: ಪಿಎಂ ಗೆ ಎಚ್.ಡಿ ದೇವೇಗೌಡ ಪತ್ರ

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ  ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ, ಮಳೆ ಇಲ್ಲದೇ ರೈತರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್​ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ. ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ. ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ.

ಈಗ ಬಿಡುಗಡೆ ಮಾಡುತ್ತಿರುವ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳುಹಿಸಲಾಗಿದೆ. ನಾಳೆ ಬಂದ್ ನಡೆಸಲಾಗುತ್ತಿದೆ. ಇಂದು ನಾನು ಕಾಂಗ್ರೆಸ್, ಬಿಜೆಪಿ ಯಾವುದೇ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಇಂದು ಕಾವೇರಿ ವಿಚಾರದ ಬಗ್ಗೆ ಮಾತ್ರವೇ ಮಾತನಾಡುತ್ತೇನೆ. ಜನರಿಗೆ ಆಗುತ್ತಿರುವ ತೊಂದರೆಗಳ ಮಾಹಿತಿಯನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕಲೆಹಾಕಿದ್ದಾರೆ.‌ ನನಗೆ ಹೋಗುವ ಶಕ್ತಿಯಿಲ್ಲ.‌ ಅದಕ್ಕಾಗಿ ಕುಮಾರಸ್ವಾಮಿ ಹೋಗಿದ್ದಾರೆ ಎಂದು ಹೇಳಿದರು.

ನೀರು ಸಂಗ್ರಹಣಾ ಸಾಮರ್ಥ್ಯ ಸಹಿತ ಎಲ್ಲ ಸ್ಥಿತಿಗತಿಗಳನ್ನು ಅರಿತು ಅರ್ಜಿ ಹಾಕಲು ತಜ್ಞರನ್ನು ನೇಮಿಸಲು ಪ್ರಧಾನಿ ಮೋದಿ ಮುಂದಾಗಬೇಕು, ಬೇರೆ ರಾಜ್ಯದ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳುಹಿಸಬೇಕು. ನಮ್ಮ ಜಲಾಶಯಗಳಿಗೆ ಆ ತಂಡ ಭೇಟಿ ನೀಡಬೇಕು. ಎಲ್ಲವನ್ನೂ ಪರಿಶೀಲನೆ ನಡೆಸಬೇಕು. ನಾಳೆ ಬಂದ್ ವಿಷಯವಾಗಿ ಯಾರು ಏನು ಮಾತನಾಡುತ್ತಾರೆ ಅನ್ನೋದು ಮುಖ್ಯವಲ್ಲ. ಇಲ್ಲಿ ರಾಜ್ಯದ ಜನರ ಹಿತ ಕಾಯುವುದು ಮುಖ್ಯ ಎಂದು ಎಚ್.ಡಿ. ದೇವೇಗೌಡ ಕಿವಿಮಾತು ಹೇಳಿದರು.

No Comments

Leave A Comment