ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾವೇರಿ ನೀರು ವಿವಾದ – ಕನ್ನಡ ಸಂಘಟನೆ ಒಕ್ಕೂಟದಿಂದ ಸೆ.29ರಂದು ಕರ್ನಾಟಕ ಬಂದ್
ಬೆಂಗಳೂರು: ಸೆ 25. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ ಸಲಹೆಗಳನ್ನು ಪಡೆದಿಲ್ಲ. ಅದೊಂದು ರಾಜಕೀಯ ಪ್ರೇರಿತ ಬಂದ್ ಆಗಿದೆ ಎಂದರು.
ಇನ್ನು ಬಂದನ್ನು ಕೇವಲ ಬೆಂಗಳೂರಿಗೆ ಸೀಮಿತ ಮಾಡಲಾಗಿದ್ದು, ಬೆಳಗಾವಿ, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ದಕ್ಷಿಣ ಕರ್ನಾಟಕ, ಮಂಗಳೂರು ಪ್ರದೇಶಗಳನ್ನು ಕಾವೇರಿ ಬಂದ್ ನಿಂದ ದೂರಿ ಇರಿಸಿರುವುದು ಸರಿಯಲ್ಲ. ಆ ಹಿನ್ನೆಲೆಯಲ್ಲಿ ಅಖಂಡ ಕರ್ನಾಟಕ್ಕೆ ಕರೆ ನೀಡಲಾಗಿದೆ ಎಂದಿದ್ದಾರೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯುವುದನ್ನು ವಿರೋಧಿಸಿ ನಾಳೆ ರಾಜಭವನ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.