ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಪಿಎಸ್ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್ಗೆ ಷರತ್ತು ಬದ್ದ ಜಾಮೀನು
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಇನ್ನು ಬಂಧನವಾಗಿ ಒಂದು ವರ್ಷ ಎರಡು ತಿಂಗಳ ಬಳಿಕ ಅಮೃತ್ ಪೌಲ್ ಗೆ ಜಾಮೀನು ಸಿಕ್ಕಂತೆ ಆಗಿದೆ.
2021ರ ಅಕ್ಟೋಬರ್ 3ರಂದು 545 ಪಿಎಸ್‌ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು 92 ಕೇಂದ್ರಗಳಲ್ಲಿ ನಡೆಯಿತು. ಪಿಎಸ್ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ.
ಅಮೃತ್ ಪೌಲ್ ಪಿಎಸ್‌ಐ ಹುದ್ದೆಯ ಆಕಾಂಕ್ಷಿಗಳಿಂದ 1.35 ಕೋಟಿ ರೂಪಾಯಿ ಹಣವನ್ನು ಪಡೆದಿದ್ದಾರೆ ಎಂಬ ಆರೋಪವಿದೆ. ತನಿಖೆ ವೇಳೆ ಈ ಹಣ ತಮ್ಮ ಸಹಾಯಕ ಹಾಗೂ ಬೇನಾಮಿ ಶಂಭುಲಿಂಗ ಸ್ವಾಮಿಗೆ ನೀಡಿದ್ದು ಬೆಳಕಿಗೆ ಬಂದಿತ್ತು. ಈತನಿಂದ 41 ಲಕ್ಷ ರೂ.ಗಳನ್ನು ಸಿಐಡಿ ವಶಪಡಿಸಿಕೊಂಡಿತ್ತು.