ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಮೌಢ್ಯಕ್ಕೆ ಸಡ್ಡು ಹೊಡೆದು ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ. ಕಳೆದ ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ ಅವರು, ಎರಡನೇ ಬಾರಿಗೆ ಅವರು ಮುಖ್ಯಮಂತ್ರಿ ಆದ ಬಳಿಕ ಇದು ಮೊದಲ ಭೇಟಿಯಾಗಿದೆ. ಸಿಎಂ ಸ್ಥಾನದಲ್ಲಿದ್ದ ವೇಳೆ 13ನೇ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ಮಲೆ ಮಹದೇಶ್ವರ ಪ್ರಾಧಿಕಾರದಿಂದ ಆಯೋಜಿಸಿರುವ ಸಾಮೂಹಿಕ ವಿವಾಹದಲ್ಲಿ ಇಂದು ಬೆಳಗ್ಗೆ ಸಿಎಂ ಭಾಗಿಯಾಗಿದ್ದಾರೆ. ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ 39 ಜೋಡಿ ಆಶೀರ್ವದಿಸಲಿದ್ದಾರೆ. ಬಳಿಕ ಸಿಎಂ ಅವರು ಪ್ರಾಧಿಕಾರದ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ನಡೆಯಲಿರುವ ಚಾಮರಾಜನಗರದ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಆರು ತಿಂಗಳ ಒಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ರಾಜ್ಯ ರಾಜಕೀಯ ನಾಯಕರಲ್ಲಿದೆ. ವೀರೇಂದ್ರ ಪಾಟೀಲ್ 1991 ರಲ್ಲಿ ಚಾಮರಾಜನಗರಕ್ಜೆ ಬಂದು ಹೋಗಿದ್ದೆ ಕೊನೆ. ನಂತರ ಚಾಮರಾಜನಗಕ್ಕೆ ಈ ಕಳಂಕ ಅಂಟಿಕೊಂಡಿತ್ತು. ಈ ಮೌಢ್ಯಕ್ಕೆ ಬೆದರಿ ಎಸ್. ಬಂಗಾರಪ್ಪ, ವೀರಪ್ಪಮೊಯ್ಲಿ, ಹೆಚ್.ಡಿ. ದೇವೇಗೌಡ, ಜೆ.ಎಚ್. ಪಟೇಲ್, ಎಸ್. ಎಂ. ಕೃಷ್ಣ, ಧರಂಸಿಂಗ್ ಅವರು ಚಾಮರಾಜನಗರಕ್ಕೆ ಕಾಲಿಟ್ಟಿರಲಿಲ್ಲ.

ಈ ವೇಳೆ ಮಲೆಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ. CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಹೇಳಿದರು.

No Comments

Leave A Comment