ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಸೆ.29ರಂದು ಕರ್ನಾಟಕ ಬಂದ್ ಹಿಂಪಡೆಯುವುದಿಲ್ಲ: ಕನ್ನಡಪರ ಹೋರಾಟಗಾರರು, ಇಂದು ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲ ಉಂಟಾಗಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ ನಡೆಸಿ ತಮಿಳುನಾಡಿಗೆ ಮತ್ತೆ 18 ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ನೀಡಿದೆ. ನಾಳೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚಿಸಿದೆ. ಇದರಿಂದ ರೈತರು ಮತ್ತಷ್ಟು ಆಕ್ರೋಶಗೊಂಡಿದ್ದು ಪ್ರತಿಭಟನೆ ಮುಂದುವರೆಸಿದ್ದಾರೆ.

ಇಂದು ಬಿಜೆಪಿ, ಜೆಡಿಎಸ್ ಜಂಟಿಯಾಗಿ ಪ್ರತಿಭಟನೆ: ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ, ಜೆಡಿಎಸ್​​ ಪ್ರತಿಭಟನೆ ನಡೆಸಲು ಮುಂದಾಗಿದೆ. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಹೆಚ್ ಡಿ ಕುಮಾರಸ್ವಾಮಿ, ಸದಾನಂದಗೌಡ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಮಂಡ್ಯ, ರಾಮನಗರ, ಮೈಸೂರು ಸೇರಿದಂತೆ ಅನೇಕ ಕಡೆ ಪ್ರತಿಭಟನೆ ಮುಂದುವರೆಯಲಿದೆ.

ಕನ್ನಡಪರ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ: ಕನ್ನಡಪರ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ. ನಿನ್ನೆ ಧರಣಿನಿರತ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಹೋರಾಟವನ್ನು ಹತ್ತಿಕ್ಕುವ ಪೊಲೀಸ್ ನಡೆ ಖಂಡಿಸಿ ಇಂದು ಪ್ರತಿಭಟನೆ ನಡೆಯಲಿದೆ.

ಇನ್ನು ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ರೈತ ಸಂಘಟನೆಯವರು ಬೆಂಗಳೂರು ಬಂದ್ (Bengaluru Bandh)​ ನಿರ್ಧಾರವನ್ನು ಆತುರದಿಂದ ತೆಗೆದುಕೊಂಡಿದ್ದರಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ನಾವು ವಾಟಾಳ್ ನಾಗರಾಜ್ (Vatal Nagaraj) ಅವರ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕ್ತೀವಿ. ನಮ್ಮ ಕಾವೇರಿ ಹೋರಾಟ ಮುಂದುವರಿಯುತ್ತೆ, ಕರ್ನಾಟಕ ಬಂದ್ ನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.

ಸೆಪ್ಟೆಂಬರ್ 29ರಂದು ನಡೆಯುವ ಕರ್ನಾಟಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಲಿದೆ. ಕನ್ನಡ ಪರ ಹೋರಾಟಗಾರು ಕಾವೇರಿಗಾಗಿ ಸದಾ ಸಿದ್ಧರಾಗುತ್ತಾರೆ ಎಂದು ಹೇಳಿದರು.

ಪ್ರಾಣ ಬಿಟ್ಟೇವು ,ಕಾವೇರಿ ಬಿಡೇವು. ಸರ್ಕಾರ ,ಪಕ್ಷಗಳು ಕಾವೇರಿ ದ್ರೋಹ ಮಾಡಿದ್ದಾರೆ. ನಾವು ಯಾವ ಪಕ್ಷದ ಪರವಾಗಿ ಇಲ್ಲ, ನಮ್ಮದು ಕಾವೇರಿಗಾಗಿ ಹೋರಾಟ. ಜೈಲು, ಬಂಧನ ನಮಗೆ ಹೊಸ ವಿಷಯ ಅಲ್ಲ. ನಾಡಿದ್ದು ಅಖಂಡ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಸಾರಾ ಗೋವಿಂದು ಹೇಳಿದರು.

kiniudupi@rediffmail.com

No Comments

Leave A Comment