ವಿವಾಹ ಸಮಾರಂಭದಲ್ಲಿ ಭೀಕರ ಅಗ್ನಿಅವಘಡ -114 ಸಜೀವ ದಹನ, 150ಕ್ಕೂ ಹೆಚ್ಚು ಮಂದಿ ಗಂಭೀರ
ಇರಾಕ್:ಸೆ 27. ವಿವಾಹ ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 114ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ.
ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇದು ಪ್ರಧಾನವಾಗಿ ಕ್ರಿಶ್ಚಿಯನ್ ಸಮುದಾಯವೇ ಹೆಚ್ಚಾಗಿ ನೆಲೆಸಿರುವ ಪ್ರದೇಶವಾಗಿದ್ದು, ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿನ ಪ್ರದೇಶವಾಗಿದೆ. ಮಂಗಳವಾರ ರಾತ್ರಿ ಸ್ಥಳೀಯ ಕಾಲಮಾನ ಸುಮಾರು 10:45ಕ್ಕೆ (19:45 GMT) ಈ ಅನಾಹುತ ಸಂಭವಿಸಿದೆ.