Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಕಾಶ್ಮೀರ: ಕುಪ್ವಾರದಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು  ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ.

“ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇದುವರೆಗೆ ಒಳನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ” ಎಂದು ಕುಪ್ವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎರಡು ಎಕೆ ರೈಫಲ್‌ಗಳು, ನಾಲ್ಕು ಎಕೆ ಮ್ಯಾಗಜೀನ್‌ಗಳು, ಒಂದು ಪಾಕಿಸ್ತಾನಿ ಪಿಸ್ತೂಲ್, ಒಂದು ಪೌಚ್ ಮತ್ತು 2,100 ರೂಪಾಯಿ ಪಾಕಿಸ್ತಾನದ ಕರೆನ್ಸಿಯನ್ನು ಎನ್‌ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

No Comments

Leave A Comment