ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ  ಮುರ್ಮು ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಮುಖಂಡರು ಪುಷ್ಪ ನಮನ ಸಲ್ಲಿಸಿದರು.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಮೋದಿಯವರು, ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಹಾದಿಯನ್ನು ಬೆಳಗಿಸುತ್ತಲೇ ಇರುತ್ತವೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ, ಎಲ್ಲರೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳಲಿ ಎಂದು ಹೇಳಿದ್ದರು.

ಮಹಾತ್ಮ ಗಾಂಧಿಯವರ ಅಹಿಂಸೆ ಮತ್ತು ಸಹಿಷ್ಣುತೆಯ ಮೌಲ್ಯಗಳನ್ನು ಗೌರವಿಸಲು ಈ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್​ ಮಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ನನ್ನ ನಮನಗಳು, ರಾಜ್ಯದ ಜನತೆಗೆ ಅಂತಾರಾಷ್ಟ್ರೀಯ ಅಹಿಂಸಾ ದಿನದ ಶುಭಾಶಯಗಳು, ಸತ್ಯ, ಅಹಿಂಸೆ, ಪ್ರೀತಿ ಮತ್ತು ಸ್ವಚ್ಛತೆಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ರಾಮರಾಜ್ಯ ಪರಿಕಲ್ಪನೆಯೊಂದಿಗೆ ದೇಶ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸಂಕಲ್ಪ ಮಾಡೋಣ ಎಂದಿದ್ದಾರೆ.

kiniudupi@rediffmail.com

No Comments

Leave A Comment