ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬೆಂಗಳೂರು: ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ತಾಯಿ-ಮಗು ಸಜೀವ ದಹನ, ಮತ್ತಿಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹವಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದೆ.  ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಮೋರಿಗೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ, ಮಗು ಸಜೀವ ದಹನವಾಗಿದ್ದಾರೆ.

ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳಿದ್ದರು. ದಂಪತಿಯನ್ನು ಮಹೇಂದ್ರನ್ ಮತ್ತು ಸಿಂಧು ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ ನಾಲ್ಕು ಘಂಟೆ ಸಮಯದಲ್ಲಿ ನಿದ್ರೆ ಮಂಪರಿನಲ್ಲಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕಾರು ರಸ್ತೆಯಿಂದ ಹೊರಬಂದು ಲಾರಿ ಮತ್ತು ಮೋರಿಯ ಗೋಡೆಗೆ ಡಿಕ್ಕಿಯಾಗಿದೆ. ಲಾರಿಯೂ ಸಹ ಪಲ್ಟಿಯಾಗಿದೆ.

ಅಪಘಾತಕ್ಕೆ ಒಳಗಾಗಿದ್ದ ಟಾಟಾ ನೆಕ್ಸಾನ್ ಕಾರನ್ನು ಅನ್ಲೈನ್‌ನಲ್ಲಿ ಬಾಡಿಗೆ ಪಡೆದಿದ್ದ ಕುಟುಂಬ ಸೆಲ್ಫ್ ಡ್ರೈವ್ ಮಾಡಿಕೊಂಡು ರಾತ್ರಿ ನಾಗಸಂದ್ರಕ್ಕೆ ಹೋಗಿದ್ದರು. ಬೆಳಗಿನ ಜಾವ ಕುಟುಂಬ ಸಹಿತ ನೈಸ್ ರಸ್ತೆಗೆ ಬಂದಿದ್ದರು. ಮೂಲತಃ ತಮಿಳುನಾಡಿನ ಸೇಲಂ ಮೂಲದ ಮಹೇಂದ್ರನ್ ಕುಟುಂಬ ರಾಮಮೂರ್ತಿ ನಗರದ ವಿಜಿನಾಪುರ ನಿವಾಸಿಗಳಾಗಿದ್ದರು ಎಂದು ತಿಳಿದುಬಂದಿದೆ.

 ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

No Comments

Leave A Comment