ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಸಾವು: ಒಟ್ಟು ಮೃತರ ಸಂಖ್ಯೆ 31ಕ್ಕೆ ಏರಿಕೆ
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬಳಿಕ ಮತ್ತೆ ಏಳು ರೋಗಿಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.
ಇದರಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆಂದು ಹೇಳಲಾಗುತ್ತಿದ್ದು, ಇದರೊಂದಿಗೆ ಕಳೆದ 48ಗಂಟೆಯಲ್ಲಿ ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು ಮೂವತ್ತೊಂದು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ನಾಂದೇಡ್‌ನ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1 ರ ನಡುವೆ 24 ಗಂಟೆಗಳಲ್ಲಿ 24 ಸಾವುಗಳು ವರದಿಯಾಗಿದ್ದು, 24 ಮಂದಿಯ ಪೈಕಿ 12 ಮಂದಿ ಮಕ್ಕಳಾಗಿದ್ದಾರೆಂದು ಮಹಾರಾಷ್ಟ್ರ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿ ಹೇಳಿದ್ದರು.
ಘಟನೆ ಬೆನ್ನಲ್ಲೇ ಮಹಾರಾಷ್ಟ್ರ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್ ಇಂದು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಅಲ್ಲದೆ ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೂ ಮಾಹಿತಿ ನೀಡಿದ್ದೇನೆ ಎಂದು ಹಸನ್ ಮುಶ್ರಿಫ್ ಹೇಳಿದ್ದಾರೆ.