ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಸರಕಾರದ ಗ್ರೀನ್ ಸಿಗ್ನಲ್

ಬೆ೦ಗಳೂರು:ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮಿತಿಯ ಕೊಠಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮರಳು ಕೆಂಪು ಕಲ್ಲು ಹಾಗೂ ಇನ್ನಿತರ ಉಪ ಖನಿಜ ಗಣಿಗಾರಿಕೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಸಚಿವರಾದ ಮಹದೇವಪ್ಪ, ಚಲುವರಾಯಸ್ವಾಮಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಗೋಪಲ್ ಪೂಜಾರಿ, ಪ್ರಸಾದ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಲಿ, ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು.

No Comments

Leave A Comment