ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ: ಸಾವಿನ ಸುತ್ತ ಹಲವು ಅನುಮಾನ!
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.
ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬದ ಹಿರಿಯರಾದ ಅರ್ಚಕ ಕೆಲಸ ಮಾಡುತ್ತಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ.
ಅರಳಸುರಳಿ ಹೊಸನಗರ ಮಾರ್ಗದಲ್ಲಿ ಕೋಕೋಡ್ ಗ್ರಾಮ ಇದೆ. ಗಾಯಾಳುವನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯಿಂದ ಗ್ರಾಮದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಗೊತ್ತಾಗಬೇಕಿದೆ.