ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪಂಜಾಬ್‌: ರೆಫ್ರಿಜರೇಟರ್ ಕಂಪ್ರೆಸರ್ ಸ್ಫೋಟ; ಒಂದೇ ಕುಟುಂಬದ ಆರು ಮಂದಿ ಸಾವು

ಜಲಂಧರ್: ಪಂಜಾಬ್‌ನ ಜಲಂಧರ್ ಜಿಲ್ಲೆಯ ಮನೆಯೊಂದರಲ್ಲಿ ರೆಫ್ರಿಜರೇಟರ್‌ನ ಕಂಪ್ರೆಸರ್‌ ಸ್ಫೋಟಗೊಂಡು  ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಕುಟುಂಬದವರು ಟಿವಿ ವೀಕ್ಷಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ಯಶಪಾಲ್ ಘಾಯ್(70), ಅವರ ಮಗ ಇಂದರ್‌ ಪಾಲ್(41), ಸೊಸೆ ರುಚಿ ಘಾಯ್(40), ಮೊಮ್ಮಕ್ಕಳಾದ ಮನ್ಶಾ(14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಇಂದರ್ಪಾಲ್ ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಂದರ್‌ಪಾಲ್ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಟುಂಬದ ಇತರ ಐವರು ಭಾನುವಾರ ರಾತ್ರಿವೇ ಸಾವನ್ನಪ್ಪಿದ್ದರು.

ಜಲಂಧರ್‌ನ ವಿಧಿವಿಜ್ಞಾನ ತಜ್ಞರ ತಂಡ, ಸ್ಫೋಟಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮಾದರಿಗಳನ್ನು ಸಂಗ್ರಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment