ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಬಳ್ಳಾರಿಯಲ್ಲಿ ಆಘಾತಕಾರಿ ಘಟನೆ; ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಆರೋಪಿಗಳಲ್ಲಿ ಒಬ್ಬಾತ ಆಕೆಯ ಸಹೋದರ ಎಂದು ಹೇಳಿಕೊಂಡು, ಪರೀಕ್ಷೆ ಬರೆಯುತ್ತಿದ್ದಾಗ ಯುವತಿಯನ್ನು ತರಗತಿಯಿಂದ ಹೊರಗೆ ಕರೆದಿದ್ದಾನೆ.
ನಂತರ ಆಕೆಯನ್ನು ಬಲವಂತವಾಗಿ ಆಟೋದಲ್ಲಿ ಹತ್ತಿಸಿಕೊಂಡು ಕೊಪ್ಪಳ ಜಿಲ್ಲೆಯ ಸಣಾಪುರದ ಹೋಟೆಲ್ ಕೊಠಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಮಾದಕ ದ್ರವ್ಯ ಬೆರೆಸಿದ ಬಿಯರ್ ಕುಡಿಯುವಂತೆ ಒತ್ತಾಯಿಸಿದ್ದಾರೆ. ಯುವತಿ ಪ್ರಜ್ಞೆ ತಪ್ಪುತ್ತಿದ್ದಂತೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಪ್ರಜ್ಞೆ ಬಂದ ಮೇಲೆ ಸಂತ್ರಸ್ತೆ ನವೀನ್, ಸಕೀಬ್, ತನು ಹಾಗೂ ಮತ್ತೊಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಗಳೆಲ್ಲರೂ ಬಳ್ಳಾರಿಯ ಕೌಲ್ ಬಜಾರ್ ನಿವಾಸಿಗಳು.
ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.