ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಗಾಜಾಪಟ್ಟಿ ಮೇಲಿನ ಇಸ್ರೇಲ್ ವಾಯುದಾಳಿಯಲ್ಲಿ 724 ಮಕ್ಕಳು ಸೇರಿ 2,215 ಮಂದಿ ಸಾವು: ಸಚಿವಾಲಯ

ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಯ ನಂತರ ಗಾಜಾ ಪಟ್ಟಿಯ ಮೇಲೆ ಇಸ್ರೇಲಿ ವಾಯುದಾಳಿ ನಡೆಸುತ್ತಿದ್ದು ಇಲ್ಲಿಯವರೆಗೂ 724 ಮಕ್ಕಳು ಸೇರಿದಂತೆ ಕನಿಷ್ಠ 2,215 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಪ್ರದೇಶದ ಹಮಾಸ್ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಾವನ್ನಪ್ಪಿದವರಲ್ಲಿ ಸುಮಾರು 458 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 324 ಜನರು ಸಾವನ್ನಪ್ಪಿದ್ದಾರೆ ಎಂದು ಹಿಂದಿನ ಹೇಳಿಕೆಯ ನಂತರ 8,714 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 320ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದು ಕನಿಷ್ಠ 1000 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಗಾಜಾದಲ್ಲಿನ ಗಾಯಾಳುಗಳಿಗಾಗಿ ವೈದ್ಯಕೀಯ ಸಾಮಗ್ರಿಗಳೊಂದಿಗೆ WHO ವಿಮಾನವು ಈಜಿಪ್ಟ್‌ಗೆ ಬಂದಿಳಿದಿದೆ.

ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್‌ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.

No Comments

Leave A Comment