Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಮಾಸ್ ಹಿರಿಯ ಕಮಾಂಡರ್ ಹತ್ಯೆ!

ಗಾಜಾಪಟ್ಟಿ: ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ನುಖ್ಬಾ ಘಟಕದ ದಕ್ಷಿಣ ಖಾನ್ ಯೂನಿಸ್ ಬೆಟಾಲಿಯನ್ ಎಂದು ಕರೆಯಲ್ಪಡುವ ಕಮಾಂಡರ್ ಬಿಲ್ಲಾಲ್ ಅಲ್-ಖೆದ್ರಾ ಅವರನ್ನು ಶಿನ್ ಬೆಟ್ ಭದ್ರತಾ ಸಂಸ್ಥೆ ಮತ್ತು ಮಿಲಿಟರಿ ಗುಪ್ತಚರ ನಿರ್ದೇಶನಾಲಯದ ಗುಪ್ತಚರ ಪ್ರಯತ್ನಗಳ ನಂತರ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.

ಈ ಮಧ್ಯೆ ಹಮಾಸ್ ಕಮಾಂಡ್ ಕೇಂದ್ರಗಳು, ಮಿಲಿಟರಿ ಕಾಂಪೌಂಡ್ ಗಳು, ರಾಕೆಟ್ ಲಾಂಚರ್ ಗಳು, ಟ್ಯಾಂಕ್ ವಿರೋಧಿ ಕ್ಷಿಪಣಿ ಉಡಾವಣಾ ಪೋಸ್ಟ್‌ಗಳು ಮತ್ತು ವೀಕ್ಷಣಾ ಪೋಸ್ಟ್‌ಗಳು ಸೇರಿದಂತೆ 100 ಕ್ಕೂ ಹೆಚ್ಚು ಕಡೆಗಳಲ್ಲಿ ಇಸ್ರೇಲ್ ರಕ್ಷಣಾ ಪಡೆ ಭಾನುವಾರ ರಾತ್ರಿಯಿಡೀ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

No Comments

Leave A Comment