ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಹಂಸಲೇಖ
ಮೈಸೂರು:ಅ. 15: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ.
ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷವಾಯಿತು. ಹೀಗಾಗಿ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ 50 ವರ್ಷವಾಗಿದೆ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ ಬಹಳ ಬೆಲೆ ಬಾಳುವಂತಹದ್ದು ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆ.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.