Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ತಿರುವಣ್ಣಾಮಲೈ: ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಲಾರಿ ನಡುವೆ ಡಿಕ್ಕಿ, 8 ಮಂದಿ ದುರ್ಮರಣ

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.

ತಿರುವಣ್ಣಾಮಲೈನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ಏಳು ಮೃತದೇಹಗಳನ್ನು ಹೊರತೆಗೆದೆದಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರನ್ನು ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡಾ ಸಾವನ್ನಪ್ಪಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪುರುಷರು, ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ವರದಿಯಾಗಿದೆ.

No Comments

Leave A Comment