ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಚಿಕ್ಕವನಿದ್ದಾಗ ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡಿದ್ದೆ: ನಾಡಿನ ಸಂಪತ್ತು, ಅಧಿಕಾರ ಎಲ್ಲಾ ವರ್ಗದ ಜನರಿಗೂ ಹಂಚಿಕೆ ಆಗಬೇಕು; ಸಿದ್ದರಾಮಯ್ಯ

ಮೈಸೂರು: ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ನಾಡಿನ ಸಂಪತ್ತು, ಅಧಿಕಾರ ಎಲ್ಲಾ ವರ್ಗದ ಜನರಿಗೂ ಹಂಚಿಕೆ ಆಗಬೇಕು. ಎಲ್ಲಾ ವರ್ಗದ ಜನರಿಗೂ ಎಲ್ಲಾ ಅವಕಾಶ ಸಿಗಬೇಕು. ಅದು ನಿಜವಾದ ಸಾಮಾಜಿಕ ನ್ಯಾಯ. ಸರ್ಕಾರ ಐದು ಗ್ಯಾರಂಟಿಗಳನ್ನು ಬದ್ಧತೆಯಿಂದ ಘೋಷಿಸಿ ಜಾರಿ ಮಾಡುತ್ತಿದೆ. ಐದನೇ ಗ್ಯಾರಂಟಿ ಮುಂದಿನ ಜನವರಿಯಲ್ಲಿ ಮಾಡುತ್ತೇವೆ. ದಸರಾ ಮಹತ್ವಕ್ಕೆ ಕುಂದು ಬಾರದಂತೆ ಸಾಂಪ್ರದಾಯಿಕ ದಸರಾ ಮಾಡುತ್ತಿದ್ದೇವೆ ಎಂದು ನುಡಿದರು.

ಕಲೆ, ಸಂಸ್ಕೃತಿ, ಸಂಪ್ರದಾಯ ನಮ್ಮ ನಾಡಿನಲ್ಲಿ ಶ್ರೀಮಂತವಾಗಿದೆ. ಕರ್ನಾಟಕ ಜನ ಸುಸಂಸ್ಕೃತ ಜನ. ನಮ್ಮಲ್ಲಿ ಪ್ರೀತಿ, ವಿಶ್ವಾಸ ಹೆಚ್ಚಿದೆ. ಪರಸ್ಪರ ಪ್ರೀತಿ, ವಿಶ್ವಾಸ, ಗೌರವದಿಂದ ಬದುಕುವುದು ಮುಖ್ಯ. ದೇಶ ಮತ್ತು ರಾಜ್ಯಕ್ಕೆ ಇದು ತುಂಬಾ ಅಗತ್ಯ ಎಂದು ಹೇಳಿದರು.

ನಾನು ಚಿಕ್ಕವನಾಗಿದ್ದಾಗ ನಮ್ಮ ಅಪ್ಪ ದಸರಾಗೆ  ಕರೆದುಕೊಂಡು ಬಂದಿದ್ದರು. ನಾನು ನನ್ನ ಅಪ್ಪನ ಹೆಗಲ ಮೇಲೆ ಕೂತು ಮೈಸೂರು ದಸರಾ ನೋಡಿದ್ದೆ ಎಂದು ತಮ್ಮ ದಸರಾ ನೆನಪನ್ನು ಮೆಲುಕು ಹಾಕಿದರು. ದೊಡ್ಡವನಾದ ಮೇಲೆ ಪ್ರತಿವರ್ಷ ದಸರಾ ನೋಡಿದ್ದೇನೆ. ವಸ್ತುಪ್ರದರ್ಶನಕ್ಕೆ ಹೋಗುವುದನ್ನು ತಪ್ಪಿಸುತ್ತಿರಲಿಲ್ಲ. ದಸರಾ ನಮ್ಮ ಸಂಸ್ಕೃತಿ ಪ್ರತೀಕ. ಹಾಗಾಗಿ ಈ ಮಹೋತ್ಸವ ಸದಾ ಕಾಯಬೇಕು ಎಂದು ಆಶಿಸಿದರು.

ಸಮಾಜದಲ್ಲಿ ಜಾತಿ ತಾರತಮ್ಯ ಇರಬಾರದು. ಎಲ್ಲರನ್ನೂ ಗೌರವ ಪ್ರೀತಿಯಿಂದ ಕಾಣಬೇಕಿದೆ. ಭಾರತದ ಸಂವಿಧಾನ ಕೂಡ ಇದನ್ನೇ ಹೇಳುತ್ತದೆ. ಕಾನೂನಿನ ಅಡಿಯಲ್ಲಿ ಎಲ್ಲರೂ ಒಂದೇ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ಸಂವಿಧಾನದ ಉದ್ದೇಶ ಈಡೇರಿಸುವುದು ಪ್ರತಿ ಸರ್ಕಾರದ ಕರ್ತವ್ಯ. ಈ ನಾಡಿನ ಸಂಪತ್ತು ಎಲ್ಲರಿಗೂ ಹಂಚಿಕೆ ಆಗಬೇಕು. ಅಂಬೇಡ್ಕರ್ ಅವರು ಹೇಳಿದಂತೆ ಜನರಿಗೆ ಆರ್ಥಿಕ ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕಿದೆ. ಈ ನಿಟ್ಟಿನಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ.‌ ಜನವರಿಯಲ್ಲಿ 5ನೇ ಗ್ಯಾರಂಟಿ ಈಡೇರಿಸಲಾಗುವುದು ಎಂದು ಹೇಳಿದರು.

42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. 30 ಸಾವಿರ ಕೋಟಿ ರೂ. ನಷ್ಟವಾಗಿದೆ. 4,800 ಕೋಟಿ ರೂ. ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. ಈಗ 116 ತಾಲೂಕು ಬರಪೀಡಿತವಾಗಿದೆ. ಕೇಂದ್ರದ ಬರುವ ಹಣದಲ್ಲೇ ಎಲ್ಲಾ ಪರಿಹಾರ ಕೊಡಲು ಆಗಲ್ಲ. ಈ ವರ್ಷ ವಿಶೇಷ ಎಂದರೆ ಹಸಿರು ಬರ ಬಂದಿದೆ. ನೋಡಲು ಹಸಿರು ಕಾಣಿಸುತ್ತೆ. ಆದರೆ ಬೆಳೆ ಬಂದಿರಲ್ಲ. ಹಿಂಗಾರು ಮಳೆ ಉತ್ತಮವಾಗಲಿ ಅಂತಾ ಚಾಮುಂಡಿ ತಾಯಿಯಲ್ಲಿ ಪ್ರಾರ್ಥಿಸಿದ್ದೇವೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕನ್ನಡಕ್ಕೆ 50 ವರ್ಷ ಸಂದಿದೆ. ದುಃಖವನ್ನು ದೂರ ಮಾಡುವ ದೇವಿ ಸನ್ನಿಧಾನದಲ್ಲಿ ಇದ್ದೇವೆ. ಇದು ನಮ್ಮ ಸಂಸ್ಕೃತಿ ಬಿಂಬಿಸುವ ಹಬ್ಬ. ಯಾವ ಊರಿಗೆ ಹೋದರೂ ಗ್ರಾಮದೇವತೆ ಇರುತ್ತಾಳೆ. ನಾಡಿನ ದೇವತೆ ಚಾಮುಂಡಿ. ಮಳೆಬೆಳೆ ಆಗಲಿ ಎಂಬುದು ನಮ್ಮ ಉದ್ದೇಶ. ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕು. ರಾಜರ ಕಾಲದಿಂದ ಇಂದಿಗೂ ದಸರಾ ನಡೆಯುತ್ತಿರುವುದು ಹೆಮ್ಮೆಯ ವಿಚಾರ.‌ ಚುನಾವಣೆಗೂ ಮುನ್ನ ನುಡಿದಂತೆ ನಡೆಯಲು ಶಕ್ತಿ‌ಕೊಡು ಎಂದು ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದೆವು. ಅದರಂತೆ ನಮ್ಮ ಐದು ಗ್ಯಾರಂಟಿ ಯಶಸ್ವಿಯಾಗಿ ನಡೆದಿದೆ ಎಂದು ವಿವರಿಸಿದರು.

No Comments

Leave A Comment