ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮಂಗಳೂರು ದಸರಾ – ಕುದ್ರೋಳಿಯಲ್ಲಿ ನವ ದುರ್ಗೆಯ ಮೂರ್ತಿಗಳ ಪ್ರತಿಷ್ಠಾಪನೆ
ಮಂಗಳೂರು:ಅ 15.ವಿಶ್ವ ವಿಖ್ಯಾತ ಪ್ರಸಿದ್ದಿಯನ್ನು ಪಡೆದಿರುವ ಮಂಗಳೂರು ದಸರಾಕ್ಕೆ ಇಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಚಾಲನೆಯನ್ನು ನೀಡಲಾಯಿತು. ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಪುರಸ್ಕಾರಗಳನ್ನು ನೆರವೇರಿಸಲಾಯಿತು.
ಕರ್ನಾಟಕ ಬ್ಯಾಂಕ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಪಂಜ ಅವರು 9 ದಿನಗಳ ದಸರಾ ಹಬ್ಬಕ್ಕೆ ಚಾಲನೆ ನೀಡಿದ್ದು, ಕುದ್ರೊಳಿ ಕ್ಷೇತ್ರದ ಆಧುನೀಕರಣದ ರೂವಾರಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ದಂಪತಿ, ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆಯ ಸದಸ್ಯರುಗಳು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಗಣಪತಿ, ಶಾರದಾ ಮಾತೆ, ಆದಿಶಕ್ತಿಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ದಿದಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ ಮಹಾಗೌರಿಯರನ್ನು ಪ್ರತಿಷ್ಠಾಪಿಸಲಾಗಿದ್ದು ದೇವರ ದರ್ಶನವನ್ನು ಪಡೆಯಲು ರಾಜ್ಯ, ದೇಶ, ಹಾಗೂ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದಾರೆ.
ಇಂದಿನಿಂದ ದೇವಸ್ಥಾನದಲ್ಲಿ 9 ದಿನಗಳ ಕಾಲ ವಿವಿಧ ರೀತಿಯ ಪೂಜಾ ಕಾರ್ಯಕ್ರಮಗಳು, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನದಾನ ದೇವಳದಲ್ಲಿ ನಡೆಯಲ್ಲಿದ್ದು ದೇವಾಲಯ ಹಾಗೂ ಹೋಗುವ ದಾರಿಯುದ್ದಕ್ಕೂ ವಿದ್ಯುತ್ ದೀಪಗಳಿಂದ ಅಲಂಕೃತವಾಗಿದ್ದು ನೋಡುಗರ ಗಮನ ಸೆಳೆಯುವಂತಾಗಿದೆ.