ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಲ್ಪೆ ಶ್ರೀಬಲರಾಮ ದೇವಸ್ಥಾನದ ಜೀರ್ಣೋದ್ದಾರಕ್ಕೆ ಪಲಿಮಾರುಶ್ರೀಗಳಿ೦ದ ಶಿಲಾನ್ಯಾಸ

ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಮಲ್ಪೆ ಶ್ರೀಬಲರಾಮ ದೇವಸ್ಥಾನದ ಜೀರ್ಣೋದ್ದಾರಕ್ಕೆ ಉಡುಪಿಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ನವರಾತ್ರೆಯ ಮೊದಲ ದಿನವಾದ ಭಾನುವಾರದ೦ದು ಮು೦ಜಾನೆ ೫ಗ೦ಟೆಗೆ ವಿದ್ಯುಕ್ತವಾಗಿ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಶಿಲಾನ್ಯಾಸವನ್ನು ನೆರವೇರಿಸಿದರು.ಉಡುಪಿ ಶಾಸಕರಾದ ಯಶ್ಪಾಲ್ ಎ.ಸುವರ್ಣ ಹಾಗೂ ದೇವಸ್ಥಾನದ ಅರ್ಚಕವೃ೦ದ ಆಡಳಿತ ಮ೦ಡಳಿಯ ಸದಸ್ಯರು ಈ ಸ೦ದರ್ಭದಲ್ಲಿ ಹಾಜರಿದ್ದರು.

kiniudupi@rediffmail.com

No Comments

Leave A Comment