ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
‘ಜೆಡಿಎಸ್ ಒಂದು ಕುಟುಂಬದ ಪಕ್ಷವಲ್ಲ’ ಬಿಜೆಪಿ ಸೋಲಿಸಲು ಕಾಂಗ್ರೆಸ್ ಬೆಂಬಲಿಸುತ್ತೇವೆ: ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ
ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇದೀಗ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ.
ಜೆಡಿಎಸ್ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ಪಕ್ಷಕ್ಕೆ ನಾನು ರಾಜ್ಯಾಧ್ಯಕ್ಷ. ನನ್ನನ್ನು ತೆಗೆದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ ಪಕ್ಷ ಒಂದು ಕುಟುಂಬದ ಸ್ವತ್ತಲ್ಲ ಎಂದರು. ಜಾತ್ಯತೀತತೆ ಜೆಡಿಎಸ್ ಪಕ್ಷದ್ದ ಸಿದ್ಧಾಂತವಾಗಿದೆ. ಆದರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಸೋಲಿಸಲು ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇವೆ ಎಂದು ಇಬ್ರಾಹಿಂ ಹೇಳಿದ್ದಾರೆ.
ಕುಮಾರಸ್ವಾಮಿ ಶಾಸಕರಾಗಿರುವುದಕ್ಕೆ ಅಮಿಶ್ ಶಾ ಕರೆದಿದ್ದಾರೆ. ಆದರೆ ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್ ಡಿ ಕುಮಾರಸ್ವಾಮಿ ಗೆದ್ದಿದ್ದು ಯಾರಿಂದ. ಅಲ್ಲಿ ಮುಸ್ಲಿಮರು ಮತ ಹಾಕದಿದ್ದರೆ ನೀವು ಸೋತು ಮನೆ ಸೇರುತ್ತಿದ್ದರು. ಹೀಗಾಗಿ ಈಗಲೂ ಬಿಜೆಪಿ ಜೊತೆ ಹೋಗದೆ ಕೋರ್ ಕಮಿಟಿ ಮಾಡಿ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಾವು ಮೈತ್ರಿ ಮಾಡಿಕೊಂಡರೆ ನಾಲ್ಕು ಸೀಟು ಸಿಗುತ್ತದೆ. ನಾವು ಶಕ್ತಿ ಪ್ರದರ್ಶನ ಮಾಡಬಹುದಿತ್ತು. ನಾನು ಕೋರ್ ಕಮಿಟಿ ರಚನೆ ಮಾಡಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದರು.
ಇಂದು ಬೆಂಗಳೂರಿನಲ್ಲಿ ನಡೆದ ಚಿತನ-ಮಂಥನ ಸಭೆಯ ಪೋಸ್ಟರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಫೋಟೋ ಕಾಣೆಯಾಗಿತ್ತು. ಇನ್ನು ಸಭೆಯಲ್ಲಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇಬ್ರಾಹಿಂ ಪಕ್ಷ ತೊರೆಯಲು ಮುಂದಾಗಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ವಿವರಿಸಿವೆ.