Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ಭಟ್ಕಳದಲ್ಲಿ ಕಾರು – ಲಾರಿ ನಡುವೆ ಅಪಘಾತ: ಉದ್ಯಾವರದ ರೀಟಾ ಮೃತ್ಯು, ಇಬ್ಬರಿಗೆ ಗಾಯ

ಭಟ್ಕಳ:ಅ.17:ಭಟ್ಕಳ ತಾಲೂಕಿನ ಮೂಢ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಅ.17 ರ ಮಂಗಳವಾರ ನಡೆದಿದೆ.

ಮೃತರನ್ನು ಉಡುಪಿಯ ಉದ್ಯಾವರ ಮೂಲದ ರೀಟಾ ಡಿಸೋಜಾ ಎಂದು ಗುರುತಿಸಲಾಗಿದೆ. ರೀಟಾ ಅವರ ಪತಿ ಜೇವಿಯರ್ ರಾಜ್ ಡಿಸೋಜಾ ಮತ್ತು ಪುತ್ರಿ ಇನ್ರಿಕಾ ಅವರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರು ಸಂಚರಿಸುತ್ತಿದ್ದ ಕಾರು ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.

ಕುಟುಂಬವು ಕಾರಿನಲ್ಲಿ ಉಡುಪಿ ಕಡೆಯಿಂದ ಗೋವಾ ಕಡೆಗೆ ಹೋಗುವ ವೇಳೆ ಮುರುಡೇಶ್ವರ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಅಪಘಾತವಾಗಿದೆ. ತಕ್ಷಣ ಕಾರಿನಲ್ಲಿ ಸಿಲುಕಿ ಹಾಕಿಕೊಂಡ ಗಾಯಾಳುಗಳನ್ನು ಸ್ಥಳೀಯರು ರಕ್ಷಣೆ ಮಾಡಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಗಂಭೀರವಾಗಿ ಗಾಯಗೊಂಡ ರೀಟಾ ರನ್ನು ಹೆಚ್ಚಿನ ಚಿಕಿತ್ಸೆಗೆ ಸಾಗಿಸಿವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

ಇವರ ಪತಿ ಹಾಗೂ ಪುತ್ರಿ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment