Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಾರ್ಕಳ : ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ನಾಪತ್ತೆ

ಕಾರ್ಕಳ : ಅ.21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಶೃತಿನ್ ಶೆಟ್ಟಿ (35) ಕಾಣೆಯಾಗಿರುವ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದಾರೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು.

ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು, 19ರಂದು ಸಿಎಲ್ ರಜೆ ಹಾಕಿದ್ದರು.  ಶೃತಿನ್ ಶೆಟ್ಟಿಯವರನ್ನು ಯಾರಾದರೂ ಕಂಡರೆ 0820-2555452 ನಂಬರ್ ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಕನ್ನಡ, ಇಂಗ್ಲಿಷ್, ಹಿಂದಿ, ತುಳು ಭಾಷೆ ಮಾತನಾಡುತ್ತಾರೆ.

No Comments

Leave A Comment