Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

India vs New Zealand: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ; ಶಮಿ, ಸೂರ್ಯಕುಮಾರ್‌ಗೆ ಅವಕಾಶ

ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ​​ಕ್ರೀಡಾಂಗಣದಲ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಸರಣಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಉಭಯ ತಂಡಗಳು ಇಂದು ಸೆಣೆಸುತ್ತಿವೆ. ಸದ್ಯ ಆಡಿರುವ ನಾಲ್ಕು ಪಂದ್ಯಗಳಲ್ಲಿ ನಾಲ್ಕರಲ್ಲು ವಿಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ನ್ಯೂಜೆಲೆಂಡ್ ಮೊದಲನೇ ಮತ್ತು ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿವೆ.

ಸದ್ಯ ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊರಗುಳಿದಿದ್ದಾರೆ. ಪುಣೆಯಲ್ಲಿ ಗುರುವಾರ ನಡೆದ ವಿಶ್ವಕಪ್ ಪಂದ್ಯದ ವೇಳೆ ಹಾರ್ದಿಕ್ ಗಾಯಗೊಂಡಿದ್ದರು. ಶಾರ್ದೂಲ್ ಠಾಕೂರ್ ಅವರನ್ನು ಕೂಡ ಆಡುವ ಬಳಗದಿಂದ ಕೈಬಿಡಲಾಗಿದೆ.

ಇವರಿಬ್ಬರ ಬದಲಿಗೆ ತಂಡದಲ್ಲಿ ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್‌ಗೆ ಸ್ಥಾನ ಕಲ್ಪಿಸಲಾಗಿದೆ.

ಈ ಹಿಂದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ನ್ಯೂಜೆಲೆಂಡ್ ಸೋಲಿಸಿತ್ತು. ಸದ್ಯ ಟೀಂ ಇಂಡಿಯಾ ಈ ಬಾರಿಯಾದರೂ ನ್ಯೂಜೆಲೆಂಡ್ ವಿರುದ್ಧ ಗೆಲ್ಲುವ ಭರವಸೆಯಲ್ಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ವ್ಯಾಪಕ ನಿರೀಕ್ಷೆ ಹುಟ್ಟುಹಾಕಿದೆ.

ನ್ಯೂಜಿಲೆಂಡ್ ಈವರೆಗೆ ಐಸಿಸಿ ವಿಶ್ವಕಪ್ ಗೆದ್ದಿಲ್ಲ. ಭಾರತ ಕೂಡ 12 ವರ್ಷಗಳಿಂದ ಐಸಿಸಿ ಟ್ರೋಫಿಯ ಬರ ಎದರಿಸುತ್ತಿದೆ.

No Comments

Leave A Comment